ಸರ್ಕಾರದ ಕೆಲಸ

ವಿಧಾನ ಸೌಧದ
ಮೊದಲಂತಸ್ತಿನ ಮೊದಲ ದರ್ಜೆ
ಗುಮಾಸ್ತನನ್ನು ವಿಚಾರಿಸಿದೆ
ನನ್ನ ಅರ್ಜಿಯ ಬಗ್ಗೆ;
ತಣ್ಣಗೆ ಅವ ಅಂದ-
ನೀವು ಸರ್ಕಾರಕ್ಕೆ ಕೊಟ್ಟಿರಿ
ಅದು ಸರ್ಕಾರದ ಕೆಲಸ
ಅರ್ಥಾತ್ ದೇವರ ಕೆಲಸ;
ಅಂದ ಮೇಲೆ ನನ್ನಲ್ಲೇನು
ನಿಮಗೆ ಕೆಲಸ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂವಿಧಾನದ ಪರಮಾರ್ಶೆಯ ಸುತ್ತ ಮುತ್ತ
Next post ಮತೀಯ ಹಿಂಸೆ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys