ಬದುಕು

ಹುಟ್ಟಿಗೆ ಕುಡಿಯುವ ಹಾಲ ಬಟ್ಟಲು
ಬಾಲ್ಯಕ್ಕೆ ಮೆಲ್ಲುವ ಬೆಣ್ಣೆಯ ಬಟ್ಟಲು
ಯೌವ್ವನಕ್ಕೆ ಹೀರುವ ಮದಿರೆಯ ಬಟ್ಟಲು
ನಡುಹರೆಯಕ್ಕೆ ಚಪ್ಪರಿಸುವ ಮಸಾಲ ಬಟ್ಟಲು
ಮುದಿಹರೆಯಕ್ಕೆ ಗುಟುಕರಿಸಲಾರದ ಔಷಧಿ ಬಟ್ಟಲು
ಸಾವಿಗೆ-ಕೈ ಜಾರಿದ ಬೋರಲು ಬಟ್ಟಲು
ಇದು ಬದುಕಿಗೆ ಬೇಕಾದ ಆರು ವಿಧದ ಬಟ್ಟಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಮಿಯಾನ್ ಬುದ್ಧ ಮತ್ತು ಪಾರಿವಾಳ
Next post ಪ್ರಫುಲ್ಲತೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys