ಯಕ್ಷಿಗಳೂ ತಾಳೆಮರಗಳೂ

ಯಕ್ಷಿಗಳು ಹನ್ನೆರಡು
ತಾಳೆಮರ ಹನ್ನೆರಡು
ಮರಕ್ಕೊಂದರಂತೆ ಸುಖವಾಗಿದ್ದುವು
ಆಹ! ಸುಖವಾಗಿದ್ದುವು

ಎಲ್ಲಿಯ ತನಕ
ಭಾರೀ ಬಿರುಗಾಳಿ ಹೊಡೆತಕ್ಕೆ
ಒಂದು ಮರ ಕಿತ್ತು ಬೀಳುವ ತನಕ
ಅಹ! ಕಿತ್ತುಬೀಳುವ ತನಕ

ಯಕ್ಷಿಗಳು ಹನ್ನೆರಡು
ತಾಳೆಮರ ಹನ್ನೊಂದು
ಒಂದು ಯಕ್ಷಿಗೆ ಮರವಿಲ್ಲ
ಆಹ! ಒಂದು ಯಕ್ಷಿಗೆ ಮರವಿಲ್ಲ

ಮರ ಬಿಟ್ಟು ಹೋಗಲು
ಎಲ್ಲರಿಗೂ ಭಯ
ಮರವಿಲ್ಲದ ಯಕ್ಷಿ ಕಾಯುತ್ತ ಕುಳಿತಿದೆ
ಆಹ! ಕಾಯುತ್ತ ಕುಳಿತಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆತ್ತಮ್ಮ
Next post ಅಕ್ಕ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys