ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ. ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು, ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು. ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ ಗರಿಗೊಂಡ ಬಲ ಇಳಿದು...

ನಾಳಿನ ಮಗು

ಫಲದ ನಿರ್‍ಣಯವು ಏನು ಆದರೂ ಕ್ಷುಬ್ಧನಾಗನವನು ನೇರಾದ ರೀತಿ ರುಜು ಅವನ ನೀತಿ, ಸಿದ್ಧಿಸದೆ ಇದ್ದರೂನು ತನ್ನ ಯೋಗ್ಯತೆಗೆ ತಕ್ಕ ರೀತಿಯಲಿ ಕರ್‍ಮಕುಶಲನಾಗಿ ಸತ್ಯವನ್ನೆ ಸಾರುವನು ಜಗಕೆ ನಿರ್‍ಭೀತ ಧೀರನಾಗಿ. ಫಲವೆಂದೆ ಬರಲಿ ಯುಗಯುಗವು...

ಪೂರ್‍ಣ ಮಾಡು

ಅಂದೆ ನೆಲವು ಪಡೆದೀತು ಅಮರ ಜೀವಂತ ಶಾಂತಿಯನ್ನು ಎಂದು ನಾಡ-ನಡೆವಳಿಕೆಯಲ್ಲಿ ನೆಲೆಗೊಂಬುದೊಂದೆ ನಿಜವು. ಆ ಪೂರ್‍ಣ ನಿಜದ ನೆಲೆ ಮೊಲೆಯ ಬಯಸಿ ಭಕ್ತಿಯಲಪೇಕ್ಷಿಸುವೆವು. ನೀ ಪೂರ್‍ಣ ಮಾಡು ಹೇ ದೊರೆಯೆ! ಎಲ್ಲಿಯೂ ಬಯ್ತ ಬಯಕೆಯನ್ನು....