(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ...