ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ|| ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ|| ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ, ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ; ತನ್ನ ತಾನು...

ಜ್ಞಾನದ ಮೊರೆ

ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ, ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ, ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ, ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ- ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ? ಧಾರೆಧಾರೆಗಳಾಗಿ ಜಗದಿ ನೆತ್ತರವೆ ಪ್ರಹಿಸಲಿ,...

ಸೂರ್ಯಕಾಂತಿ

ಅಕೊ ಮೂಡ ಬಯಲಿನಲಿ ಬೆಳ್ನೆರೆಯ ಚೆಲ್ಲಿಹರು ಅದೋ ಮೂಡ ಬಾನಿನಲಿ ರವಿ ಕಾರುತಿಹನು! ಭುವಿಯೆಲ್ಲ ಬೆಳಕಿನಾ ಮುನ್ನೀರಂತಾದುದು; ಗಿರಿಯೆಲ್ಲ ನಗುವಂತೆ ತಲೆಯೆತ್ತಿ ನೋಡುವುದು. ಚಂದಿರನ ಓಡಿಸಿತು ಇಬ್ಬನಿಯ ಮಳೆಯು; ಬಿಳಿವಣ್ಣು ತಾರಕೆಯ ಹಕ್ಕಿಗಳು ಕುಟುಕಿದುವು....

ಬಂದೆನೊ – ಇದೊ ಬಂದೆ

ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು!  ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ...