Home / ಕಥೆ / ಕಿರು ಕಥೆ

ಕಿರು ಕಥೆ

ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ ವಾರಿಗೆಯವರೊಂದಿಗೆ ಚಕ್ಕಂದವಾಡುತ್ತಿತ್ತು. ಮನೆಗೆ ಬಂದರೆ ...

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು...

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವ...

ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ.  ಸುಮಾರು ತೊಂಬತ್ತರ ವಯಸ್ಸು.  ತುಂಬಾ ಸೋತವನಂತೆ ಕಾಣಿಸುತ್ತಿದ್ದ.  ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು ಸ್ವಾತಂತ್ರ್‍ಯಯೋಧನೆಂದು ಊರಿಗೇ ತಿಳಿದಿತ್ತು.  ಅನೇಕ...

ಇದ್ದಕ್ಕಿದ್ದಂತೆ ಆ ದಿನ ಭೂಮಿ, “ಕಡಲೆ… ಓ ಕಡಲೆ…” ಎಂದು ಕೂಗಿತು. ಮೊರೆತ ನಿಲ್ಲಿಸಿದ ಕಡಲು “ಏನು?” ಎಂದಿತು. “ಜನರು ಮಾತಾಡಿಕೊಳ್ಳುತ್ತಿರುವುದು ನಿಜವೆ?” “ಅದೇನು ಮಾತಾಡಿಕೊಳ್...

ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳ...

ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ ಅದರ ಜನ್ಮ ಜಾಲಾಡುವ,...

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ...

ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾ...

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...