ಸೇವಕನ ಸಂಬಳವೇಕೆ ಕಡಿಮೆ?

ಒಂದೂರಿನಲ್ಲಿ ಒಬ್ಬ ರಾಜ, ಅವನಿಗೊಬ್ಬ ಪ್ರಧಾನಿ ಹಾಗೂ ಒಬ್ಬ ಸೇವಕ ಇದ್ದರು. ಸೇವಕನು ತನ್ನನ್ನು ಪ್ರಧಾನಿಯೊಡನೆ ಹೋಲಿಸಿಕೊಂಡು ಹಲವು ಬಗೆಯಾಗಿ ಚಿಂತಿಸುತ್ತಿದ್ದನು - "ತನ್ನ ಸಂಬಳ ಹತ್ತೆಂಟು ರೂಪಾಯಿ ಮಾತ್ರ. ಪ್ರಧಾನಿಯ ಸಂಬಳ ಬೊಗಸೆ...

ಮಾಡಿದ್ದೊಂದು ಆಗಿದ್ದೊಂದು

ಹೀಗೆ ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿಗೆ ಸೊಸೆಯೂ ಬಂದಿದ್ದಳು. ವಾಡಿಕೆಯಂತೆ ಅತ್ತೆ ಸೊಸೆಯರಲ್ಲಿ ವಿರಸಕ್ಕಾರಂಭವಾಗಿ ಕದನವಾಗತೊಡಗಿದವು. ಕದನದ ಪರಿಣಾಮದಿಂದ ಕುನಸುಹುಟ್ಟಿಕೊಂಡಿತು ಪರಸ್ಪರರಲ್ಲಿ. ಎಂಥದೋ ಒಂದು ಉಪಾಯದಿಂದ ಅತ್ತೆಯನ್ನು ಇಲ್ಲದಂತಾಗಿಸಬೇಕೆಂಬ ಹಂಚಿಕೆಯನ್ನು ಸೊಸೆ ಹುಡುಕ...

ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು - "ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?" "ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?" "ಏನಂದರು ?" ಸಂಗಮ್ಮನ ಪ್ರಶ್ನೆ. "ಮಜ್ಜಿಗೆ...

ದೀಪ ಮಾತಾಡಿತು

ಒಂದೂರಾಗ ಅತ್ತಿಗಿ ನಾದಿನಿ ಇದ್ದು ನಾದಿನಿ ನೀರು ಹೊಯ್ಕೊಂಡಿದ್ದಳು. ಐದರಾಗ ಅಣ್ಣ ತಂಗೀಗಿ ಕರಕೊಂಡು ಬರಲಿಕ್ಕ ಹೋದ. ಕರಕೊಂಡೂ ಬಂದ. ಅಡವ್ಯಾಗ ಒಂದು ಬಾಳೆಗಿಡ ಇತ್ತು. ಅದರ ಬುಡಕ್ಕ ಅಣ್ಣ ತಂಗಿ ಮನಕೊಂಡರು. ತಂಗಿ...

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು. ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ...

ತಾಯಕೊಂದ ಪಾಪ

ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು - ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು...

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು. ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ...

ಬಾರದ ಬರ

ಒಂದೂರಿನಲ್ಲಿ ಇಬ್ಬರು ಅಣ್ಣತಮ್ಮಂದಿರಿದ್ದರು. ಅವರವರ ಹೆಂಡಿರು ಬಂದಿದ್ದರು. ಅಣ್ಣನಿಗೆ ಮಕ್ಕಳಾಗಿರಲಿಲ್ಲ. ತಮ್ಮನಿಗೆ ಸಾಕಷ್ಟು ಮಕ್ಕಳಾಗಿದ್ದರು. ನೆಗೆಣ್ಣಿಯರಲ್ಲಿ ಕೂಡಿನಡೆಯಲಿಲ್ಲವೆಂದು ಅವರಿಬ್ಬರೂ ಆಸ್ತಿಯನ್ನು ಹಂಚಿಕೊಂಡು ಬೇರೆಯಾದರು. ದೇಶಕ್ಕೇ ಬರಗಾಲ ಬಂತು ಒಮ್ಮೆ. ಆವಾಗ ಜನರು ಹೊಟ್ಟೆಗಿಲ್ಲದೆ ಕುಸುಬೆಯನ್ನು...

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ...

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ...