Home / ಲೇಖನ / ಪತ್ರ

ಪತ್ರ

ಪ್ರೀತಿಯ ಗೆಳೆಯಾ, ಈ ದಿನ ನಾಗರಪಂಚಮಿ. ನಮ್ಮೂರ ಎಲ್ಲಾ ಬೇವಿನ ಮರದ ಬಡ್ಡಿಗೆ ದಪ್ಪದ ಹುರಿಹಗ್ಗ ಕಟ್ಟಿ ಜೋಕಾಲಿ ಕಟ್ಟಿದ್ದಾರೆ. ರಸ್ತೆಯ ಉದ್ದ ಅಗಲಕ್ಕೂ ಹೆಂಗಸರು ಸೀರೆಯನ್ನು ಕಚ್ಚೆ ಹಾಕಿ ಬಿಗಿದು, ಜುರ್ ಬುರ್ ಅಂತ ಜೋಕಾಲಿ ಜೀಕುವಾಗ ಅವರ ನಿರಾಳ...

ಪ್ರೀತಿಯ ಗೆಳೆಯಾ, ಈ ಸಂಜೆ ಒಂದೆರಡು ಹನಿ ಮಳೆಬಿತ್ತು. ಅದು ಪೂರ್ತಿಯಾಗಿ ಮನಸ್ಸನ್ನು ತೋಯಿಸಲಿಲ್ಲ. ಹೊತ್ತು ಕಂತುವ ಮಬ್ಬು ಮನಸ್ಸಿಗೂ ಗೌಂವ್ ಎನ್ನುವ ಏಕಾಂಗಿತನವನ್ನು ಎದೆಯೊಳಗೆ ಸುರಿದು ಬಿಡುತ್ತದೆ. ಗೋಡೆಗಳು ಮಾತನಾಡುವದಿಲ್ಲ. ತಬ್ಬಿ ಬೋರೆಂದ...

ಪ್ರೀತಿಯ ಗೆಳೆಯಾ, ಮಳೆ ಬಂದಿಲ್ಲ. ಬಾಂಬೆಯಲ್ಲಿ ಭಾರಿ ಮಳೆ ಅಂತೆ. ಘಟ್ಟದ ಮೇಲೆ ಘಟ್ಟದ ಕೆಳಗೆ ಕರಾವಳಿಯಲ್ಲಿ ಭಾರಿಮಳೆ ಅಂತ ಚಿಕ್ಕಿ ಕಾಗದ ಹಾಕಿದ್ದಾಳೆ. ಕಪ್ಪಾದ ಪಡುಕೋಣೆಯಲ್ಲಿ ಭೋರೆಂದು ಸುರಿಯುವ ಮಳೆಯಲ್ಲಿ ಚಿಕ್ಕಿಯರು ಹಲಸಿನ ಹಣ್ಣು ಸುಲಿಯುವ...

ಪ್ರೀತಿಯ ಗೆಳೆಯಾ, ಜೂನ್ ತಿಂಗಳು ಮೊದಲ ತಾರೀಕು. ಏನೋಧಾವಂತ, ಆತಂಕ ಎದೆಯೊಳಗೆ. ಇಂದು ಶಾಲೆಯ ಹೊಸ ಅಂಗಳದಲ್ಲಿ ಪುಟ್ಟ ಪಾದಗಳನ್ನು ಪ್ರಪ್ರಥಮವಾಗಿ ಹೆಜ್ಜೆ ಇಡುವ ಮಗುವಿಗೂ, ಅದರ ಅಪ್ಪ ಅಮ್ಮನಿಗೂ ಯಾವುದೇ ದೊಡ್ಡ ಯುದ್ಧದ ಮೈದಾನಕ್ಕೆ ಹೊರಡುವ ಆತಂಕ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...