ತಾಯಿಗೊಬ್ಬ ಮಗ ಇದ್ದನು. “ಗಳಿಸಿಕೊಂಡು ಬರುತ್ತೇನೆ. ರೂಕ್ಕ ತರುತ್ತೇನೆ. ನೂರು ರೂಪಾಯಿಕೊಡು” ಎಂದು ಮಗನು ತಾಯಿಗೆ ಕೇಳುತ್ತಾನೆ. “ಮಗನೇ, ನೀನು ಮೊದಲೇ ಮರುಳ. ನೀನು ಗಳಿಸುವುದು ಸುಳ್ಳು. ಸುಮ್ಮನೇ ಮನೆಯಲ್ಲಿ ಕುಳಿತುಕೊಳ್ಳ...

ಅವಳಿಗೆ ಒಂದು ಮಾತು ಹೇಳದೆ ಅಲ್ಲಿಂದ ಹೊರಡುವುದು ಸಭ್ಯತೆಯಲ್ಲ ಎನಿಸಿ ಯಾವುದಕ್ಕೂ ಒಂದು ಮಾತು ಹೇಳಿಯೆ ಹೊರಡುವ ಎಂದುಕೊಂಡು ಅವಳು ಇಳಿದುಕೊಂಡಿದ್ದ ಹೋಟೆಲ್ ಕಡೆಗೆ ಹೊರಟೆ. ಮೂರೇ ದಿನದ ಪರಿಚಯವಾದ್ದರಿಂದ ಅವಳಿಗೆ ವಿದಾಯ ಹೇಳಿಯೇ ಹೊರಡಬೇಕೆಂಬ ಆಸಕ...

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರ...

“ನೀವೂನು ಯಾಕೆ ಜೊತೆಗೆ ಬರಬಾದು? ಸಂದರ್ಶನಕ್ಕೆ ಅಡ್ಡಿ ಇಲ್ದಂತೇನೆ ಮಾತಾಡ್ತ ಹೋಗೋಣ ಬನ್ನಿ….” ಎಂದು ಸೆನ್ ಹೇಳಿದಾಗ, ನನಗೂ ಆ ಕ್ಷಣಕ್ಕೆ ಮಾಡಲು ಬೇರೇನೂ ಕೆಲಸವಿಲ್ಲದ್ದರಿಂದ ಟೇಪ್‌ರಿಕಾರ್ಡರ್ ಆರಿಸಿ ‘ಎಲ್ಲಿಗೆ -ಏನೂ’ ಎಂ...

ಮನೆ ಮುಂದೆ ಸಾರಣೆ ಮಾಡಿಲ್ಲ ಚೆಂದವಾಗಿ ರಂಗೋಲಿ ಬಿಡಿಸಿಲ್ಲ. ನಲ್ಲಿ ನೀರು ಹಿಡಿಯಲೂ ಬಂದಿಲ್ಲ ಹೊತ್ತು ಮೀರುತ್ತಿದ್ದರೂ ಕಾಣುತ್ತಿಲ್ಲ! ಅವನು ಸಾಕಿದ ನಾಯಿ ಮಾತ್ರ ಕುಂಯ್‌ಗುಟ್ಟುತ್ತಾ ಮನೆ ಒಳಗೂ ಹೊರಗೂ ಅಡ್ಡಾಡುತ್ತಿತ್ತು. ಚೆಂಬಸಪ್ಪ ಹಂಗೆಲ್ಲಾ...

ಜೀವನದ ಗತದಲ್ಲೇ ಹೂತು ಹೋಗಿ ಗತಕ್ಕೆ ಮಾತ್ರ ಸೀಮಿತವಾದ ಹಲವಾರು ಸಂಬಂಧಗಳು ನೆನಪಿನ ಮೂಲಕ ಪ್ರಾಮುಖ್ಯ ಪಡೆದುಕೊಂಡು ಪ್ರಾಧಾನ್ಯ ಸ್ಥಾಪಿಸಿಕೊಳ್ಳುವ ಸಂದರ್ಭಗಳು ಅನೇಕ. ಅವುಗಳು ಪ್ರಸಕ್ತಕ್ಕೆ ಜೀವವಿಲ್ಲದ ಎಲುಬುಗೂಡಿನಂತೆ. ಶ್ರಾದ್ಧದಂತೆ, ಅಷ್ಟೆ....

ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ. ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್...

ತಾಯಿತಂದಿಗಳಿಗೆ ಇಬ್ಬರು ಮಕ್ಕಳು- ಗಂಡೊಂದು ಹೆಣ್ಣೊಂದು. ಜಂಗಮನೊಬ್ಬ ಭಿಕ್ಷಾಕ್ಕ ಬಂದ – “ನಿಮ್ಮ ಮಗಳೀಗಿ ಸಾಡೇ ಸಾತಿ ಆದ. ಅದ್ರಿಂದ ನಿಮಗೂ ಸುಖ ಇಲ್ಲ- ಅವಳಿಗೂ ಸುಖ ಇಲ್ಲ. ಆಕೀಗಿ ದೂರಮಾಡಬೇಕು. ಅಂದರ ಯಾರಿಗೂ ದುಃಖ ಇಲ್ಲ&#8221...

ತಂದೆ ಇದ್ದೊಬ್ಬ ಮಗನಿಗೆ ನೆರೆಯೂರಿನ ಒಂದು ಕನ್ನೆಯನ್ನು ತಂದು ಮದುವೆ ಮಾಡಿದ್ದನು. ಆದರೂ ಅವನು ನಿಶ್ಚಿಂತನಾಗಲಿಲ್ಲ. ಸೂಸೆಯು ತನ್ನ ಗಂಡನನ್ನು ಮಮತೆಯಿಂದ ನೋಡಿಕೊಳವಳೋ ಇಲ್ಲನೋ ಎಂಬುದನ್ನು ಪರೀಕ್ಷಿಸಿ ನೋಡಬೇಕೆಂದು ತವಕಿಸುತ್ತಿದ್ದನು. ಒಂದು ದಿ...

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....