ಒಂದು ಪ್ರಭೇಧದ ಭಿನ್ನ ರುಚಿಯ ಸಸಿಗಳೆರಡ ಆಯ್ದು ಕೊಯ್ದು ಒಂದರ ಬುಡಕ್ಕೆ ಮತ್ತೊಂದರ ನಡು ಜೋಡಿಸಿ ತಾಳಿಯ ಬಂಧದಿ ಬಿಗಿದು ಬೆಳೆಸಿ ನೋಡಿರಿ ಮೂಲದೆರಡರ ಗುಣ, ಲಕ್ಷಣ ಲಯವಾಗಿ ಸುಭಿನ್ನ ಫಲದೊಂದು ಸಸಿ ರೂಪುಗೊಳ್ಳುವುದು *****...

ಹೋಗಲಾರೆ ನಾ ದೇಗುಲಕೆ ಹೃದಯವೆ ದೇಗುಲವಿಲ್ಲಿ ದೇವರು ಒಬ್ಬರೂ ಇಲ್ಲಿಲ್ಲ ದೇವತೆ ಮಾತ್ರವೆ ಇಹಳಿಲ್ಲಿ \\ಪ\\ ಎತ್ತಿರುವೆ ನಾ ಆರತಿಯ ಕಂಗಳಲಿ ಜೋತಿಯ ಉರಿಸಿ ಪಠಿಸುತ್ತಿರುವೆ ಮಂತ್ರವನು ಪ್ರಣಯದಾಟದಿ ತುಟಿ ಮಿಡಿಸಿ ಪ್ರಸನ್ನವಾಗಿದೆ ಮುಖಾರವಿಂದ ಇದಕ...

ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ ಟಾಮ್. ಪ್ರಾಜೆಕ್ಟ್ ಮೇಲೆ ಮೂರು ತಿಂಗಳು ಭಾರತಕ್ಕೆ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...