ಒಡಲು-ಒಡೆಯನು ತೀರಿಕೊಳಲು ಹುಟ್ಟಿದ ಮನೆಗೆ ಬಂದ ಹೆಣ್ಣಿನ ಹಾಗೆ. ಅವಳಣ್ಣ ತಮ್ಮದಿರು ತಮ್ಮದೆನುವೊಲು ಅವಳ ಆಸ್ತಿಪಾಸ್ತಿಯ ಬಳಿಸಿ ಬಿಂಕದೋರುವರು; ಅವಳೋ ಇವರ ಒಗೆತನವ ಕಿಳ್ಳಿಕೇತನು ಗೊಂಬೆ ಕುಣಿಸುವೊಲು ಕುಣಿಸುವಳು. ಸರಸದುರವಣಿಗೆ ಮೆರವಣಿಗೆ. ಕಣ್...

ಅಪ್ಪಾ ಸಾಹೇಬರ ಭಾಷಣ (ಮಹಾರಾಷ್ಟ್ರ ಸಾಹಿತ್ಯ ಸಮ್ಮೇಲನ) ದಾದಾಸಾಹೇಬ, ತಾತ್ಯಾಸಾಹೇಬ, ಕಾಕಾಸಾಹೇಬ, ಬಾಪೂಸಾಹೇಬ ಅಣ್ಣಾಸಾಹೇಬ ಹಾಗೂ ಪ್ರತಿನಿಧಿ ಬಂಧುಭಗಿನಿಯರೆ, ಬೆಳಗಾವಿ ಶಹರದ ಮರಾಠಿ ಮಾತನಾಡುವವರ ಪರವಾಗಿ ಅತ್ಯಾನಂದದಿಂದ ಇಂದು ತಮ್ಮೆಲ್ಲರಿಗೆ ...

ಏನೆಂಥ ದುರ್ಗತಿಯು ಬಂದೊದಗಿತಲಾ ಹೀನವೆನುತಾ ಮಧು ಫಲಕ ಬದಲಾಗಿ ತೃಣ ಧಾನ್ಯವನೆ ಸಿರಿಧ್ಯಾನವೆನುತಾರೋಗ್ಯವನು ಕನವರಿಸುತಲದದೇ ದಿನಪನುರಿಯನೇರಿಸುವ ದಿನಚರಿಯ ಮೋಹ ಮದ್ಯದೊಳಿರಲು – ವಿಜ್ಞಾನೇಶ್ವರಾ *****...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...