ಮಳೆ – ಹುಳ


ರಸ್ತೆ ಲೈಟು, ಅದರ
ಸುತ್ತ ಮುತ್ತಿದ ಹುಳಗಳನ್ನೆಲ್ಲಾ ನೋಡಿದಾಗ
ಪಕ್ಕನೆ ನೆನಪಾಗುತ್ತದೆ
ರಾಜಕಾರಣಿ ಮತ್ತು ಚೇಲಗಳು
ಇಷ್ಟೇ ವ್ಯತ್ಯಾಸ
ಅಲ್ಲಿ ಸಾಯುತ್ತವೆ
ಇಲ್ಲಿ ಸಾಯಿಸುತ್ತಾರೆ.


ಮಳೆಯ ಮರುದಿನ
ಇರುವೆಗಳಿಗೆ ಜಾತ್ರೆಯೋ ಜಾತ್ರೆ
ಸತ್ತ ಹುಳಗಳ ತೇರು
ಗೋಡೆಯ ಉದ್ದಗಲ
ಎಳೆದೂ ಎಳೆದೂ ಹರಕೆ ತೀರಿಸಿ
ಮರುದಿನ ಮಾಯವಾಗಿಬಿಡುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಡಾಯಿ
Next post ಗುಜರಿ ಅದ್ದಿಲಿಚ್ಚನ ಜಿಹಾದಿಯು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…