ಕಾಮನ ಬಿಲ್ಲು

ಇರುವುದೊಂದೇ ಬಣ್ಣ ಅದು ಹೋಳಾದಾಗ ಕಾಣುವುದು ಏಳು
ಇದಕ್ಕೆ ಏನೇನೋ ಹೆಸರು
ಮಳೆಬಿಲ್ಲು, ಇಂದ್ರ ಧನಸ್ಸು,
ಸೂರೆಗೊಂಡಿದೆ ಇದು ಕವಿ ಜನರ ಮನಸ್ಸು
ಎಷ್ಟೊಂದು ಸುಮಧುರ ಎಂದ್ಯಾರೋ
ಅಂದಿದ್ದಕ್ಕೆ ಹೇಳಿದ ನಮ್ಮೂರ ಧುರಂಧರ
ಪಂಚಾಯ್ತಿ ಚೇರಮನ್;
ಅಯ್ಯೋ ಬಿಡಿ ನಮ್ಮೂರಲ್ಲಿ ಮಳೆ ಬಿಸಿಲು
ಜೋಡಿಯಾದಾಗ ಈ ಬಿಲ್ಲು ಬಹಳ ಕಾಮನ್.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ವಶಾಂತಿಯ ಪೂಜೆ
Next post ಬಿಕ್ಕಳಿಸಿ ಅಳದಿರಲಿ…. ಪ್ರೀತಿ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…