ಜಯಮಂಗಳಂ ಜಯ ಜಗತ್ಯಾಳು

ಜಯಮಂಗಳಂ ಜಯ ಜಗತ್ಯಾಳು
ಜಯ ಮಹಾರುದ್ರಗೆ || ಪ ||

ರುದ್ರ ಭಕ್ತರು ರುದ್ರ ತಳಗಿಯ ಪಿಡಿದು
ರುದ್ರಮಂತ್ರವ ಜಪಿಸಿ ರುದ್ರನೊಳು
ರುದ್ರದೃಷ್ಟಿಯನಿಟ್ಟು ರುದ್ರನಡಿಗಳಿಗೆ || ೧ ||

ಶಿವನೆ ಗಗನವೇರಿ ಶಿವ ನಿಮ್ಮೊಳೊಲಿದು
ಶಿವನೆನಿಪ ಶಿವರುದ್ರ ವಿಷಯಗಳ ಸವರಿ ಭುವನತಳಕಿಳಿದು
ಭವಗಳ ಪಿಡಿದು ತಕತಕನೆ ಪರರುದ್ರನಡಿಗಳಿಗೆ ||೨||

ನಾರಿ ಕಾಳಿಗೆ ಒಲಿದು ನಾರಸಿಂಹಗೆಲಿದು
ಮೂರುಪುರ ಸುಟ್ಟ ಸುಕುಮಾರಗೆ
ಧಾರುಣಿ ಶಿಶುನಾಳಧೀಶ ಚಿದ್ರೂಪನಿಗೆ ಗೋವಿಂದನಿಗೆ
ಆರುತಿಯ ಬೆಳಗಿರೆಂದು ಆದಿರುದ್ರನಿಗೆ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರುತಿ ಬೆಳಗುವೆನು ಯೋಗದ
Next post ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…