ಹೂವು ಹೂವಿಗೆ ಹೇಳಲಿ

ದೇವ ದೇವನ ಮಾತು ಕೇಳಲಿ
ಹೂವು ಹೂವಿಗೆ ಹೇಳಲಿ ||

ಕೊಳಲ ಗಾನಕೆ ಮಳಲು ಕರಗಲಿ
ಮುಳ್ಳು ಮಲ್ಲಿಗೆಯಾಗಲಿ
ಬಿಸಿಲು ತಣ್ಣಗೆ ತಂಪು ತುಂಬಲಿ
ಚಂದ್ರಬಿಂಬವ ಕುಡಿಯಲಿ

ಸ್ವೈರ ಕೇಳಿ: ವೈರ ಹೋಳಿ
ಗೈರು ಹಾಜರಿ ಹಾಕಲಿ
ಕಣ್ಣು ತುಂಬಲಿ ಗಲ್ಲ ತುಂಬಲಿ
ನಗೆಯು ತುಟಿಯಲಿ ತುಳುಕಲಿ

ಶಬ್ದದಾಚೆಯ ಮೌನ ಕೂಗಲಿ
ಶಾಂತಿ ಹೂಗಳು ಅರಳಲಿ
ಮನದ ಶಾಂತಿಗೆ ವಿಶ್ವಶಾಂತಿಯ
ಯೋಗ ಕಿರಣವು ತಬ್ಬಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ
Next post ಲೋಹಿಯಾ ಹೇಳಿದ್ದು

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…