ಬರಲಿಲ್ಲ ನನ್ನವ

ಬರಲಿಲ್ಲ ನನ್ನವ
ಬರಲಿಲ್ಲ ಏಕವ್ವ
ಬರದೇ ಕಾಡುವನೇಕೆ
ಬರಿದಾಗಿದೆ ಎನ್ನ ಮನವು
ಅರಿಯನೇಕೆ ಅವ ||

ಸೊಬಗಿಲ್ಲ ಗೆಲುವಿಲ್ಲ
ಒಲವಿಲ್ಲ ನೆಲವಿಲ್ಲ
ಕಣ್ತುಂಬಿ ನಿಂದು
ಸೆರೆಯಾಗಿದೆ ಮನ
ಕಾಣದಿಹನೇಕೆ ಅವ ||

ಕನಸಲ್ಲಿ ನನಸಲ್ಲಿ
ವಿರಹದಾ ನೋವಲ್ಲಿ
ಸರಸ ಸಲ್ಲಾಪದಲ್ಲಿ
ನೂರೆಂಟು ಬಯಕೆಗಳ ತುಂಬಿ
ಬಾರದಿಹನೇಕೆ ಅವ ||

ಆಷಾಡ ಮಾಸದಾಗ
ಇಂಪಾದ ಗಾನದಾಗ
ಬರೆದಾಗ ಕವಿತೆಯ
ಅನುರಾಗದಿ ಕೂಡಿ ನಲಿದಾಡೆ
ಬಾರದಿಹನೇಕೆ ಅವ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಾಕಲೇಟ್
Next post ಲೆಕ್ಕ ಹಾಕಿಲ್ಲ ಎಷ್ಟು?

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…