ದುರಂಧರಾ ಇದು ರಣದ ಐಸುರ

ದುರಂಧರಾ ಇದು ರಣದ ಐಸುರ || ಪ ||

ಘನಸಮರ ನಡೆದಿತು
ಚಿನುಮಯ ಶರಣರಿಗಿಂದು
ಭಟರ ಹಾರಗಳು ಭಟರ ವೈರಿಗಳು
ಹಟದಿಂದ ಹೊಡೆದ ಸಂಕಟ ಜಯಿಸುವಂಥ || ೧ ||

ಧರಿಭಾರವನು ಧರಿಗಿಳಿಸಿದ ತಾನು
ಗಿರಿಯ ಮೇದಿನಿಯಿಂದ ಅರಸರಿಗಿದು ಬಲಾ
ಮೇದಿನಿಗಧಿಕ ಆದಿ ಶಿಶುನಾಳಧೀನ
ಪಾದದರುಶನವ ಮಾಡಿದ ಬಲಾ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರತೀಕ್ಷೆ
Next post ಡಿಗ್ರಿ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…