ಮತ್ತೆ ಬೆಳಗಾಗಿದೆ

ಮತ್ತೆ ಬೆಳಗಾಗಿದೆ
ಬೆಳಕಿನ ಸಮುದ್ರದಲ್ಲಿ
ಜಗತ್ತು ಮುಖ
ತೊಳೆದುಕೊಳ್ಳುತ್ತಿದೆ.
ಸೂರ್ಯ ಮೈಮುರಿಯುತ್ತಿದ್ದಾನೆ.

ಪೇಪರು ಕೊಡುವ
ಪುಟ್ಟ ಹುಡುಗನಿಗೆ
ಕರೆಗಂಟೆ ಎಟುಕುತ್ತಿಲ್ಲ

ಹಾಲು ಕೊಡುವ ಮುದುಕ
ಸಾವಿನ ಸುಖದಲಿ
ಮೈಮರೆತಿರುವ
ಹೆಂಗಸರನ್ನು ಬದುಕಿನ
ಬಾಗಿಲಿಗೆ ಎಳೆಯುತ್ತಿದ್ದಾನೆ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಧ್ಯಯನ, ಅಭಿವೃದ್ಧಿ ಮತ್ತು ಹಸಿವಿನ ಭಾಷೆ (ಕನ್ನಡ ವಿಶ್ವವಿದ್ಯಾಲಯದ ಘಟಿಕೋತ್ಸವ ಭಾಷಣ)
Next post ಮೋಹ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…