ದೇವರಿಗೆ

ಕರುಳು ಬಳ್ಳಿಯಲಿ
ಹರಿದು ಬಂದವನು
ರಕ್ತಗತನಾಗಿಹನು

ನರನಾಡಿಯಲಿ
ಸಂಚರಿಸಿ
ಉಸಿರು ಕೊಟ್ಟಿಹನು

ಆಶೆ ಬೆಂಕಿಯನಿಕ್ಕಿ
ಎಚ್ಚರವಾಗಿಹನು

ಈಗವನ ಕಣ್ಣಿಂದಲೆ
ನಾನವನ ನೋಡುವೆನು

ಹಣ್ಣಲ್ಲಿ ಬೇರೂರಿದಂತೆ
ನನ್ನಲ್ಲಿ ಅವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೀರಪ್ಪನ್ ಎಲ್ಲಿದ್ದಾನೆ, ನೀವು ಕಂಡಿರಾ ನೀವು ಕಂಡಿರಾ?
Next post ಚದುರಂಗ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…