ದೀಪ ಉರಿಯಿತು

ದೀಪ ಉರಿಯಿತು
ಭಾವ ಬೆಳಗಿತು
ನಮ್ಮ ಮನಗಳಂತೆ
ನಮ್ಮದೇ ಧ್ಯಾನ ಮಗ್ನತೆಯಲ್ಲಿ||

ಹಣತೆ ಎಂಬ ದೇಹ
ಎಣ್ಣೆ ಎಂಬ ಧಮನಿ,
ಜೀವನ ಎಂಬ ಬತ್ತಿ
ಆತ್ಮವೆಂಬ ಜ್ಯೋತಿಯಲ್ಲಿ||

ಮನೆಯೆ ಗುಡಿಯು
ನೀನು ಇರುವೆನೆಂಬ ಸ್ಥಿರ
ಧರ್‍ಮಕರ್‍ಮ ಮನನ
ನ್ಯಾಯ ನೀತಿ ಗುಣದಲ್ಲಿ||

ತ್ಯಾಗ ಶೀಲ ಮಾನ
ಮಾನವತೆ ಎಂಬ ಚಿತ್ತ
ಯೋಗ ಭೋಗನಿರತ
ಆತ್ಮನೆಂಬ ದಿವ್ಯ ಕಿರಣದಲ್ಲಿ||

ಪ್ರೀತಿ ಎಂಬ ನೆಲ
ವಿಶ್ವಾಸ ಎಂಬ ಮನೆತನ
ಹಿರಿಯರ ಹಣತೆ ಬೆಳಗಿ
ಭಾವಪೂರ್‍ಣ ಅನಂತವಾಯ್ತು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವನವೆನ್ನದಿದ್ಯಾಕೆ ಪ್ರಶ್ನೋತ್ತರದಂತಿಹುದು?
Next post ಕೂಸು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…