ಹೇಳುವೆ ಮೋರುಮ ಐಸುರದೊಳಗೊಂದು

ಹೇಳುವೆ ಮೋರುಮ ಐಸುರದೊಳಗೊಂದು
ಮಾಳಗಿ ಮೇಲೆ ಅಲಾವಿ ಕುಣಿ |ಪ|

ತೋಳನ ಮದವಿಗೆ ಗಾಳಿ ದೇವರು ಬಂದು
ಬಾಳಿಯ ವನದಾಗ ತಾಳಿ ಕಟ್ಟಿದ ಗೊನಿ |೧|

ಜಾರತ ಕರ್ಮದಿ ಆರೇರ ಹುಡುಗಿಯು
ಸೋರುವ ತಾಬೂತ ಏರಿ ಕುಳಿತಮನಿ |೨|

ಶಿಶುನಾಳಧೀಶನ ಸಖನಾದ ಹಸೇನ
ದಶದಿನದೊಳು ಹಾಡಿ ಆಣಿಕಲ್ಲಿನ ಸೋನಿ |೩|
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಕ್ಸ್ ಬ್ರಿಟಾನಿಕ
Next post ಪ್ರೀತಿ ದೀಪ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…