ಹನಮಂತ ಹಾರಿದಾ ಲಂಕಾ

ಹನಮಂತ ಹಾರಿದಾ ಲಂಕಾ
ಸುಟ್ಟುಬಿಟ್ಟಾನೋ ಬಿಡು ನಿನ ಬಿಂಕಾ ||ಪ||

ರಾಮ ರಘುಪತಿ ಭಕ್ತಾ
ಒಂದು ನಿಮಿಷದೂಳಗ ತಂದುಕೊಟ್ಟನೋ ಸೀತಾ
ಹೌದೌದು ರಾಮರವದೂತಾ ||೧||

ರಾಮ-ಲಕ್ಷ್ಮರ ಮಾತು
ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು
ಉಂಗುರ ಕೊಟ್ಟಿದ್ದು ಗೊತ್ತು ||೨||

ಶಿಶುನಾಳಧೀಶನ ಸ್ಮರಣಿ ಮರಿಬ್ಯಾಡ್ಯಾವತ್ತು
ರಾಮಾಯಣ ಇಲ್ಲಗ ಮುಗಿದಿತ್ತು
ಗುರುನಾಥಗೋವಿಂದನ ಪಾದ ಹಿಡಿಬೇಕೊ ತುರ್ತು ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಗಿಲ ಜೇನು
Next post ಹೊಸ ವರ್ಷ ಬಂದಂತೆ ಯಾರು ಬಂದಾರು

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…