ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೧

ಹೇಗೆಂದು ಅಳೆವುದು
ಈ ಹಾಳು ಹಸಿವನ್ನು
ಒಮ್ಮೆ ಇತ್ತಿತ್ತ
ಒಮ್ಮೆ ಅತ್ತತ್ತ
ಅಳತೆಗೋಲುಗಳೇ ಪೊಳ್ಳು.
ಲೆಕ್ಕವಿರದಷ್ಟು ರೊಟ್ಟಿ
ತುಂಬಿಸಿದರೂ
ಹಸಿವಿನ ತಕ್ಕಡಿ ತಟ್ಟೆ
ಏರುವುದಿಲ್ಲ
ತುಲಾಭಾರ ಮುಗಿಯುವುದಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇರು ನೀನು ಇಲ್ಲದಿರು ನೀನು
Next post ಬಸುರಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…