ಬಡವನಡುಗೆಯ ಸೂತ್ರಗಳೆನ್ನ ಕವನಗಳು
ಕಾಡಿನೊಳಂತೆ ಬೆಳೆವ ಕಂದಮೂಲಗಳನುಪಚರಿಸಿ
ಬಡಿಸಿಹೆನೀ ರುಚಿಯ ಗ್ರಹಿಸುವೊಡೆ ಹಸಿದುಂಬ
ತುಡುಗಿನೊಳರಸುವ ಮನವಿರಬೇಕಲ್ಲದೊಡೆ
ಜಿಡ್ಡಿನನ್ನವನುಂಡ ಪೇಟೆ ಮನಕಿದೊಗ್ಗದು – ವಿಜ್ಞಾನೇಶ್ವರಾ
*****
ಜಿಡ್ಡಿನನ್ನ =Ghee Rice
Related Post
ಸಣ್ಣ ಕತೆ
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…