ಇಳೆದಾಯಿ

ಮಣಿದಿದೆ ವಿಶ್ವವು ನಿನ್ನ ಚರಣಕೆ
ಇಳೆದಾಯಿ ಶುಭದಾಯಿನಿ
ಮಣ್ಣ ಕಣಕಣ ರಮ್ಯ ತೋರಣ
ನಾಕದಂದಣ ಜಗ ಕಾರಣ…..

ಆದಿ ಅಂತ್ಯದಗೊಡವೆ ಸಲ್ಲದು
ಜೀವದೊಡವೆಯ ಶ್ರೀನಿಧಿ
ಮುನ್ನ ಬಾಳಿಗೆ ಭೀತಿ ಒಲ್ಲದು…..
ಭಾವದಕ್ಷಯ ತವನಿಧಿ……

ತಮದ ಬಸಿರಿಗೆ ಬೆಳಕಿನೌತಣ
ಬೆಳಕಿಗೆನಿತೋ ನವ್ಯದ ರಿಂಗಣ
ನವೋದಯದ ಶುಭೋದಯದಲೂ
ನಿತ್ಯ ಸಾಗಿದೆ ಕಾಲನ ಚಾರಣ…..

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೪
Next post ೭೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬೀದರ ಅನುಭವಗಳು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…