ರಾಮ ಅತ್ತ ಸೀತೆ ಇತ್ತ

ರಾಮ ಅತ್ತ ಸೀತೆ ಇತ್ತ
ನಡುವೆ ರಾತ್ರಿ ಕೂಗಿತೆ
ನಿನ್ನ ಬಿಲ್ಲು ಜಂಗು ತಿಂದು
ಹುಲ್ಲು ಹುಡಿಯ ಮಲ್ಲಿತೆ ||೧||

ರಾಮ ರಾಮ ರಾಮ ಎನುತೆ
ಕಾಮ ಕಾಮ ಎಂದೆನೆ
ಸೀತೆ ಪ್ರೀತೆ ಪೂತೆ ಎನುತೆ
ಕೋತಿ ದೂತೆ ಯಾದೆನೆ ||೨||

ಕಲಿಯ ಕೈಯ ಬಲಿಯು ಆದೆ
ಸೀತೆ ಕೆಟ್ಟು ಹೋದೆನೆ
ಅಡುಗೆ ಅಟ್ಟು ಉಡುಗೆ ಉಟ್ಟು
ಪೆಟ್ಟು ತಿಂದು ಅತ್ತೆನೆ ||೩||

ನಾನು ಸೀತೆ ನಾನು ಪೂತೆ
ಮರಳಿ ಪಡೆವೆ ರಾಮನಾ
ಪತಿತ ಕೋತಿ ತನವ ನೀಗಿ
ಮತ್ತೆ ಪಡೆವೆ ದೇವನಾ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವಲಿಂಗ
Next post ತಪ್ಪು

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…