ದೂರ ದೂರ ದೂರ ಗುಡ್ಡ

ದೂರ ದೂರ ದೂರ ಗುಡ್ಡ
ಹಾರಿ ಹಾರಿ ಬರುತ್ತಿವೆ
ಹಸಿರು ಹೊಗರು ಹಣ್ಣು ಹೂವು
ತೂರಿ ತೂರಿ ತರುತಿವೆ ||೧||

ಅಗೊ ಅಲ್ಲಿ ತಗೊ ಇಲ್ಲಿ
ನುಗ್ಗಿ ನುಗ್ಗಿ ಬಂದವು
ದಿಗಿಲು ದಾಟಿ ಭುಗಿಲು ದಾಟಿ
ಹಿಗ್ಗಿ ಹಿಗ್ಗಿ ನಿಂದವು ||೨||

ಯಾರು ಏನು ಎಂಬ ಚಿಂತೆ
ಓಡಿ ಓಡಿ ಹೋಗಲಿ
ಅವನೆ ಅವನೆ ಎಂಬ ಭಾವ
ಮನನ ಮನನವಾಗಲಿ ||೩||

ಡವಿಗೆ ಢೋಲು ಢಾಲು ಸಾಕು
ಬಂತು ನೋಡು ಸಂತಸಾ
ಹೊಳೆಯು ತುಂಬಿ ಇಳೆಯು ತುಂಬಿ
ತುಳುಕಿ ಹರ್ಷ ಹುಮ್ಮಸಾ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೊಬೈಲ್ ರೊಮಾನ್ಸ್
Next post ತಪ್ಪು

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…