ಹಗುರ ಹಗುರ ಹೂವ ಮೇಲೆ

ಹಗುರ ಹಗುರ ಹೂವ ಮೇಲೆ
ಹೂವು ಗಲ್ಲ ಹೂವಿಸು
ತನನ ತನನ ಹನಿಯ ಮೇಲೆ
ಜೇನ ಹನಿಯ ಗಾನಿಸು ||೧||

ಮೆಲ್ಲ ಮೆಲ್ಲ ಮಧುರ ಪಾದ
ಚಿಗುರ ಮೇಲೆ ತುಂಬಿಸು
ದಲದ ದಲದ ಎಲೆಯ ಮೇಲೆ
ಹಸಿರ ಪ್ರೀತಿ ರೂಪಿಸು ||೨||

ಮಂದ ಮಂದ ಪುಂಗಿ ಪವನ
ಮುಗಿಲ ಮೇಲೆ ತೇಲಿಸು
ಚಂದ ಚಂದ ಹಕ್ಕಿ ಹಾರ
ಗಾಳಿ ತೇರ ತೇರಿಸು ||೩||

ಶಾಂತಿ ಸಂಪು ತಂಪು ಇಂಪು
ಕೊಳನ ಹಂಸೆ ಆಡಲಿ
ಅಲೆಯ ಮೇಲೆ ಡೋಣಿ ತೇಲಿ
ಗಂಧ ಗುಡಿಯ ಸೇರಲಿ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗ್ನ ಪ್ರೀತಿ
Next post ನಾಳೆ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…