ಇನ್ನು ಸಾಕು ನಿಲ್ಲು ಹೋಗು

ಇನ್ನು ಸಾಕು ನಿಲ್ಲು ಹೋಗು
ಕಲಹ ಕಲಿಯ ಕಾಲನೆ
ಇನ್ನು ತಡೆದ ರಾಣೆ ಹರನೆ
ಬರಲಿ ರಾಮ ದೇವನ ||೧||

ಕಥೆಯ ಮೇಲೆ ಕಥೆಯು ಹತ್ತಿ
ವ್ಯಥೆಯ ಬಣವೆ ಉರಿದಿದೆ
ಉರಿಯ ಮೇಲೆ ಉರಿಯು ಹತ್ತಿ
ಕಡೆಯ ತೇರು ಸರಿದಿದೆ ||೨||

ಸಕ್ರಿಗಿಂತ ರುಚಿಯು ರಕ್ತ
ರಕ್ತದಾಹ ಕೂಗಿದೆ
ಅದೇ ಕೂಗು ಅದೇ ತಾಗು
ಗುಂಡು ಗುಂಡ ಕೂಡಿದೆ |೩||

ನಿಮ್ಮ ಮನೆಯ ಮಕ್ಕಳನ್ನು
ನೀವೆ ಕೊಲ್ವುದೇತಕೆ
ನಿಮ್ಮ ಅಣ್ಣ ಅಕ್ಕ ತಂಗಿ
ಕೊಂದು ಬೆಳೆವುದೇತಕೆ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರ್ಸನಲ್ ಸೆಕ್ರೆಟರಿ
Next post ಹೋಗ್ತೀರಾ?

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…