ಏನಂತಿ

ಏನಂತಿ ವಾಸಂತಿ
ಬಾ ನನ್ನ ಕೂಡೆ ಸಂತಿ
ತಲೆ ತುಂಬ ಸೇವಂತಿ
ಮುಡಿಸುವೆನು ಏನಂತಿ

ದೂರದ ಹಾದಿಯಲ್ಲ
ಯಾರದು ಭೀತಿಯಿಲ್ಲ
ಸಾಗೋಣ ಮೆಲ್ಲ ಮೆಲ್ಲ
ವಾಸಂತಿ ವಾಸಂತಿ
ಏನಂತಿ ರೂಪವಂತಿ

ಬಳೆಯಂಗಡಿಯುದ್ದಕು
ಎಷ್ಟೊಂದು ಬಣ್ಣ ಬೆಳಕು
ಯಾವ ಕೈಗೆ ಏನು ಬೇಕು
ವಾಸಂತಿ ವಾಸಂತಿ
ಏನಂತಿ ಕೋಪವಂತಿ

ತಿರುಗಣೆ ತೊಟ್ಟಿಲಲ್ಲಿ
ಮುಗಿಲಿನ ಮೆಟ್ಟಲಲ್ಲಿ
ನಾ ನಿನ್ನ ಪಕ್ಕದಲ್ಲಿ
ವಾಸಂತಿ ವಾಸಂತಿ
ಏನಂತಿ ಮೌನವಂತಿ

ಏನಂತಿ ವಾಸಂತಿ
ಏನಂತಿ ಏನಂತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೆಳೆತನದ ಅಳತೆ
Next post ಗುರಾಣಿ

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…