ಬಾಹುಬಲಿಗೆ

ಎಲ್ಲ ಒಲಿಯೆ ಎಂಥ ಬಲಿಯೆ
ಬಾಹು ಬಲಿಯೆ ನಿನ್ನದು
ಹೇಳು ನನಗೆ ಬಿಡುವ ಬಗೆ
ತಾನೆ ಗೆದ್ದು ಪಡೆದುದು

ಕಣ್ಣರಪ್ಪೆ ಬಲವನೊಪ್ಪೆ
ಆಗಿ ನೀನು ಅನಿಮಿಷ
ಬೇಡವೆನುತ ಭೋಗದಮೃತ
ಸಡಿಲುಗೊಂಡ ನಿಮಿಷ

ಬಿಟ್ಟು ದೇಶ ಬಿಟ್ಟು ಕೋಶ
ಬಿಟ್ಟು ಪಡೆದ ಬಿಡುಗಡೆ
ಜಗದಗಲ ನೆಲಮುಗಿಲ
ಆಚೆ ನಿಂತ ನಿಲುಗಡೆ

ನೋಡುತಿದ್ದ ಹಾಗೆ ಎದ್ದ
ನೀನು ಬೆಳೆದ ಎತ್ತರ
ಮುಗುಳು ನಗೆಯು ಮೌನ ಬಗೆಯ
ಯಾವ ಪ್ರಶ್ನೆಗುತ್ತರ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವಳ ಸ್ಥಾನವೆಲ್ಲಿ?
Next post ಲಗ್ನ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…