ಬುದ್ಧಪೂರ್ಣಮಿ

ಇದು ಬುದ್ಧ ಪೂರ್ಣಮಿ
ಇದು ಶುದ್ಧ ಪೂರ್ಣಮಿ
ಎಲ್ಲ ಪೂರ್ಣಮಿಯಂತಲ್ಲ
ಜಗವೆ ತೊಯ್ಪದಲ್ಲ!

ಎಲ್ಲರ ಕಣ್ಗಳ ತೆರೆಸಿ
ಲೋಕದ ಮಾಯೆಯ ಹರಿಸಿ
ಬುದ್ಧ ಜನಿಸಿದಂದು
ವೈಶಾಖ ಪೂರ್ಣಮಿಯಿಂದು

ಜನ್ಮಾಂತರದಿಂದೆದ್ದ
ದುಃಖದ ಮೂಲವ ಗೆದ್ದ
ಬುದ್ಧ ಜನಿಸಿದಂದು
ವೈಶಾಖ ಪೂರ್ಣಮಿಯಿಂದು

ಕರುಣೆಯೆ ಅರಿವಿನ ದಾರಿ
ಎಂದ ಪೂರ್ಣಾವತಾರಿ
ಬುದ್ಧ ಜನಿಸಿದಂದು
ವೈಶಾಖ ಪೂರ್ಣಮಿಯಿಂದು

ಬುದ್ಧಂ ಶರಣಂ ಗಚ್ಛಾಮಿ
ಸಂಘಂ ಶರಣಂ ಗಚ್ಛಾಮಿ
ಬುದ್ಧ ಜನಿಸಿದಂದು
ವೈಶಾಖ ಪೂರ್ಣಮಿಯಿಂದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಕ್ಕಳ ಮನಸ್ಸು
Next post ಬಡವೆ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…