ಕೀರ್ತನೆ

ಯನ್ನ ತಲೆಯನ್ನ ಸೋರೆ ಮಾಡಿ
ಯನ್ನ ನರಗಳ ತಂತಿಮಾಡಿ
ನಿನ್ನ ಸ್ವರವನ್ನ ಯನ್ನಿಂದ ಧ್ವನಿಸಿ
ಗೊಂಬೆಯಾಟವಯ್ಯಾ ಎಂದು ಕುಣಿಸಿ
ಮಣಿಸಿ ದಣಿಸಿ
ದಾಸರ ದಾಸ ಚಪ್ರಾಸಿ ಮಾಡ್ಕೊ
ತಲೆಮೇಲೆ ಕೂತ್ಕೊ
ಯನ್ನ ನೆತ್ತರು ಕುದಿಸಿ ದಾಮರು ಮಾಡ್ಕೊ
ರೋಡಿಗೆ ಹಾಕ್ಕೊ
ಓಡ್ಸು ಅದರ್ಮೇಲೆ ನಿನ್ನ ಇಂಪಾಲಾ
ಯನ್ನ ಚರ್ಮವ ಚಪ್ಪಲಿ ಮಾಡ್ಕೊ
ಹಾಕಿಕೋ ತುಳ್ಕೊ

ಖಂಡವಿದಕೋ ಮಾಂಸವಿದಕೋ
ಬೇಕಾದ್ರೆ ಬೇಯಿಸ್ಕೊ
ಉಂಡು ತೇಗು ಕ್ಕೊ ಕ್ಕೋ
ತಗೋ ಯನ್ನ ಮೂಳೆ
ನಿನ್ನ ತ್ರಾಣಕ್ಕೆ ಒಳ್ಳೇದು
ಸೂಪು ಮಾಡಿ ಕುಡೀ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಿರುಪ್ಪಾವೈ – ಆಂಡಾಳ್ ದೇವಿಯ ದಿವ್ಯಚರಿತ್ರೆ
Next post ಅಣ್ಣ ಬಾರೊ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…