ಕುರುಬರೋ ನಾವು ಕುರುಬರೋ

ಕುರುಬರೋ ನಾವು ಕುರುಬರೋ
ಏನು ಬಲ್ಲೇವರಿ ಆತ್ಮದ ಅನುಭವವೋ ||ಪ||

ಮುನ್ನೂರು ಅರವತ್ತು ಕುರಿ ಮೇಯಿಸಿಕೊಂಡು
ಸುಮ್ಮನೆ ಬರುವಂಥಾ ||ಅ.ಪ.||

ಏಳುಸುತ್ತಿನ ಬೇಲಿ ಗಟ್ಯಾಗಿ ಹಚ್ಚಿ
ನಮ್ಮ ಕುರಿಗಳಿಟ್ಟೇವ್ರಿ ಚೆನ್ನಾಗಿ ಬಚ್ಚೆ
ಈಡೆಂಬ ಬಾಗಿಲ ಹಾಕೇವಿರಿ ಗಟ್ಟಿ
ಸಿಟ್ಟೆಂಬ ನಾಯಿಯ ಬಿಟ್ಟೇವ್ರಿ ಬಿಚ್ಚಿ ||೧||

ತನುಯೆಂಬುವ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವರಿ ಹಿಕ್ಕಿಯ ಹೆಡಗಿ
ಗುರು ಹೇಳಿದ ವಾಖ್ಯವು ಹಾಲಿನ ಗಡಗಿ
ನಮ್ಮ ಕೈಯಲ್ಲಿ ಇರುವುದೇ ಮುಕ್ತಿ ಎಂಬ ಬಡಗಿ ||೨||

ಸ್ಮಶಾನಭೂಮಿ ಇದು ಖರೆ
ನಾವು ಮೇಸಾಕ ಬಂದೇವರಿ ಕುರಿಯೇ
ತೋಳ ಮುರಿದು ಹತ್ತು ಕುರಿಯೇ
ನಾಗಲಿಂಗ ಅಜ್ಜ ಹೇಳಿದ ಪರಿಯೇ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಪಟರೂಪವಲ್ಲ ಕೇಳಿದೋ
Next post ಮೈ ಜಂಗಮ್ ಹೋಕರ ಗಲ್ಲಿ ಗಲ್ಲಿ ಫಿರಿಯಾ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…