ವಂದಿಸು ನೀ ಮೊದಲು

ವಂದಿಸು ನೀನು ಮೊದಲು
ವಂದಿಸು ನೀನು ಸೃಷ್ಟಿ ಚೆಲುವ
ಪ್ರಕೃತಿ ದಿವ್ಯನಿಧಿಗೆ ||

ಹಿಂಗಾರಿನ ಮುಂಗಾರಿನ
ಸ್ವಾತಿ ತನುವ ಹಾಸಿದೊಡಲ
ಹಾಲ್‍ಗೆನ್ನೆ ಮಕ್ಕಳ ನಗುವ
ದಿಂಚರ ದೃಷ್ಟಿ ತಾಕಿತು ಜೋಕೆ ||

ಏಳು ಬಣ್ಣಗಳ ಕಾಮನಬಿಲ್ಲ
ಸಂಭ್ರಮದೊಲುಮೆಯತ್ತ
ಸೋಲಿಲ್ಲದೆ ನಡೆ ನಿನ್ನ
ಕಾಯ್ವನವನು ಮುಂದಕೆ ||

ನಿತ್ಯನೂತನ ಸತ್ಯಚೇತನ
ಅರಿಶಿನ ಕುಂಕುಮ ಮಜ್ಜನ
ನಿಸ್ವಾರ್ಥದಲಿ ಕೂಡಿ ಮೆರೆದ
ವೀರರಿಗೆ ಮುತ್ತೈದೆಯರು
ಬೆಳಗುವ ಆರತಿ ದೀವಿಗೆ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಗಳ ದಾರಿಯಲಿ
Next post ಭೂಮಿ ಮತ್ತು ನೀರು

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…