ಕೊಂಬೆ ರೆಂಬೆಯಲ್ಲಿ ಹಣ್ಣು ನೇತುಬಿದ್ದರೆ
ತುಂಬ ಹಸಿದ ನರಿಯು ಬಂದು ನೆಗೆದು ನೋಡಿತು.
ಚಿಗಿದು ನೆಗೆದು ನೋಡೆ ನರಿಗೆ ನಿಲುಕದಾಯಿತು.
“ತೆಗೆ, ಅದೆಲ್ಲ ಹುಳಿ!” ಎಂದು ನರಿಯು ಹೊರಟಿತು.
ನೇರಿಳೆಲ್ಲ ಹುಳಿಯೆ ಆಯ್ತು ಸಾಗದಿದ್ದ ರಾಯಗೆ!
ಏರಿ ಹಾರಿ ಹೀರದಿರಲು ಧರೆಯ ಹಣ್ಣು ಹುಳ್ಳಗೆ!
*****
Related Post
ಸಣ್ಣ ಕತೆ
-
ನೆಮ್ಮದಿ
ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…