ಲಿಂಗಮ್ಮನ ವಚನಗಳು – ೪೧

ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ,
ಆ ಸರೋವರದ ಮೇಲೆ ಮಹಾಘನವ ಕಂಡೆ.
ಮಹಾಘನವಿಡಿದು, ಮನವ ನಿಲಿಸಿ,
ಕಾಯಗುಣಗಳನುಳಿದು, ಕರಣಗುಣವ ಸುಟ್ಟು,
ಆಶೆಯನೆ ಅಳಿದು, ರೋಷವನೆ ನಿಲಿಸಿ,
ಜಗದೀಶ್ವರನಾದ ಶರಣರ ಮರ್ತ್ಯದ ಹೇಸಿಗಳೆತ್ತ
ಬಲ್ಲರು ಅಪ್ಪಣಪ್ರಿಯ ಚನ್ನಬಸವಣ್ಣ?
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರ್ಡಿಯೋಗ್ರಾಫಿ
Next post ನಾವು

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…