ಎನ್ನ ಮೊರೆ

ಎನ್ನ ಬಾಳು ಡೋಲಾಯ ಮಾನ
ಆಗದಿರಲಿ ಓ ಹರಿಯೇ
ಬೇಡಿಕೊಂಬೆನು ನಿನ್ನಲ್ಲಿ ನಾ
ನಿತ್ಯವೂ ಓ ಹರಿಯೇ

ವಿಷಯದ ವಿಷ ಪಾನ ನಾ
ಬೇಡೇನು ಓ ಹರಿಯೇ
ಪಾಪದ ಜಿಲಾಂತರಂಗದಿ
ನಾ ತೇಲೆನು ಓ ಹರಿಯೇ

ಈ ಜನುಮ ಎನ್ನದು ನೀನು
ಸಾರ್ಥಕವಾಗಿಸು ಓ ಹರಿಯೆ
ಮತ್ತೆ ಮರೆತರೆಯಾಯ್ತ ದೇವ
ಇದು ನಿರರ್ಥಕ ಓ ಹರಿಯೆ

ಎಸೊ ಕಾಲದಿ ನಾನು ನಿನ್ನ
ಸುತ್ತಿ ಸುತ್ತಿರುವೆ ಓ ಹರಿಯೇ
ಇನ್ನಾದರೂ ಮಾಣಿಕ್ಯ ವಿಠಲನಿಗೆ
ಎತ್ತಿಕೊಳ್ಳು ಓ ಹರಿಯೇ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾವ ಹಾಡ ಹಾಡಲಿ
Next post ಕಾಲೇಜು ಚುನಾವಣಾ ಪ್ರಕರಣ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…