ತೀರ….(ದ) ಬಯಕೆ

ಕಡಲ ಒಡಲೊಳಗಿಂದ
ನಿನ್ನ ತಬ್ಬಿಕೊಳ್ಳುವೆನೆಂಬ
ಮುಗಿಲೆತ್ತರದ ಆಸೆಯಿಂದ
ಅಬ್ಬರಿಸಿ ರಭಸದಿ ಬರುತಿರಲು
ನಾ… ನಿನ್ನ ಸನಿಹಕೆ

ಅದೇಕೋ ತಣ್ಣಗಾದೆ ನಾ
ನಿನ್ನಲ್ಲಿಗೆ ಬರುವಷ್ಟರಲ್ಲಿ
ಸೇರದೇ ಬಿಗಿದಪ್ಪದೇ ನಿನ್ನ
ನಾ.. ಮರಳಿದೆ ಗೂಡಿಗೆ
ಕಡಲಿನಾ ಒಡಲಿಗೆ

ಮರಳಿ ಮರಳಿ ಬಂದರೂ
ನಾ.. ಸೇರಲಿಲ್ಲ ನಿನ್ನನು
ಹಾಗೇ ಉಳಿಯಿತು ನಿನ್ನ
ನಾ ಸೇರುವಾ ಬಯಕೆ..
ಹಾಗೇ ಮರಳಿದೆ ಸುಮ್ಮನೆ
ಕಡಲಿನ ಒಡಲಿಗೆ..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಡತನ
Next post ವ್ಯತ್ಯಾಸ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…