ಬಾಂಧವ್ಯ

ಬಾಂಧವ್ಯದ ನಗೆ ಇರಲಿ
ಭಾಯಿ ಭಾಯಿಗಳ ಬಾಯೊಳಗೆ
ಭಾಯಿ ಭಾಯಿ ಅಪ್ಪುಗೆ
ಭಾವೈಕ್ಯತೆಯ ಒಪ್ಪಿಗೆ

ಆತ್ಮೀಯತೆ ಸಂಗಮದಲಿ
ಸಂಬಂಧಗಳು ಬೆಸೆಯುತಲಿ
ನಾವು ನೀವು ಎನ್ನುವುದು
ನಮ್ಮ ಬಿಟ್ಟು ತೊಲಗಲಿ

ಸಹೋದರತೆಯ ಸಾರವು
ಸಕಲರಲ್ಲಿ ಮೊಳಗಲಿ
ಎಲ್ಲ ಹಬ್ಬಗಳು ಇರುವುದು
ಅರಿತು ಬೆರೆತು ಬಾಳಲೆಂದು

ನಮ್ಮ ನಾವು ಅರಿಯದಿದ್ದರೆ
ಮಾನವತೆಯ ತೊರೆದಂತೆ
ಮಾನವತೆ ತೊರೆದರೆ
ಜೀವನವೇ ಬರಡಂತೆ

ಆಚರಿಸೋಣ ಹಬ್ಬಗಳ ಸಡಗರದಿ
ಅರ್ಥಪೂರ್ಣ ಐಕ್ಯವಾದದಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಿಚಯ
Next post ನಾಟಕ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…