ಹೊಸ ಬಾಳು

ಉರಿದು ಬಿದ್ದಿತು ಅಲ್ಲಿ
ಹಳೆ ಬಾಳ ತೇರು
ಬೆಳಕು ಚಿಗುರಿತು ಇಲ್ಲಿ
ಹೊಸ ಬಾಳ ಸೂರು

ಗರಿ ಬಿಚ್ಚಿತು ಕನಸು ಮುದ ಹೆಚ್ಚಿತು
ಮೈ ನೆರೆದ ಮನಸು ಮುಗಿಲಾಯಿತು

ಅಲ್ಲಿ ನಗುತಾವೆ ಚುಕ್ಕಿ
ಹಸಿರು ಗಿಡದಾಗೆ ಹಕ್ಕಿ
ನೆರೆ ಉಕ್ಕಿತು ಮೈ ನಸುನಕ್ಕಿತು
ಗರಿಗೆದರಿ ಹಾರುತ್ತ ಅಲೆಯಾಯಿತು
ಹಾರಿ ಆಕಾಶವಾಗಿ ಬಲೆಯಾಯಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಥಾಮಸ್ ಮಾನ್‌ನ Death in Venice ಕಲಾವಿದನ ಬದುಕಿನ ದುರಂತ
Next post ಸತ್ಯ ಸಾಯಲಿಲ್ಲ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…