ದಿವ್ಯಾತ್ಮರು

ಉತ್ತ ನೇಗಿಲು ಬಂದು
ನೆತ್ತಿಗೆ ಬಡಿಯಿತು
ಕಿತ್ತ ಕಳೆಯೇ ನಮ್ಮ
ಬದುಕಾಯಿತು.

ನಮ್ಮತ್ತ ಬರಲಿಕ್ಕೆ
ಅತ್ತು ಕರೆದರೂ ಪೈರು
ಬಿಡಲಿಲ್ಲ ಅವರು
ತಲೆಯನು ಕುಟ್ಟಿ
ಹೆಡಮುರಿ ಕಟ್ಟಿ
ಎಳೆದೊಯ್ದರಲ್ಲಾ-ಎಳೆದೊಯ್ದರು.
ಕೂಳೆ ಹೊಲದ ಬಾಳು
ಮಾಡಿದರಲ್ಲಾ-ಮಾಡಿದರು
ಕಿತ್ತು ತಿನ್ನುವ ಈ ಪುಣ್ಯಾತ್ಮರು!
ಎದೆ ಸೀಳಿ ಮೆರೆವಂಥ ದಿವ್ಯಾತ್ಮರು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿತ್ರದುರ್ಗ ಜಿಲ್ಲೆಯ ಕಾವ್ಯ – ಕಳೆದ ಒಂದು ದಶಕದಿಂದ
Next post ಕೊರಗು

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…