ಪ್ರೀತಿ

ಮುಖವಿದ್ದರು ಮಾತಿಲ್ಲದ
ಮನಸಿದ್ದರು ಕನಸಿಲ್ಲದ
ಬರಿ ಮಸಣದ ಬಾಳು
ಕಪ್ಪು ಕೂದಲ ಕೆದರಿ
ಕೋರೆ ಹಲ್ಲಿನ ಮಾರಿ
ಕಗ್ಗತ್ತಲ ಕಾವಲು.

ಕಪ್ಪು ಕೋಟೆಯ ಒಳಗೆ
ಬಲಿಯಾದ ಪ್ರೀತಿಯ ರಕ್ತ
ನಂಟಿನಂಟನು ತೊಳೆದು
ಮುಳುಗಿ ತೇಲುವ ರುಂಡ
ಹಿಂದೆ ಬರುವಾ ಮುಂಡ
ರುಂಡ ಮುಂಡಕೆ ಮತ್ತೆ
ಒಂದಾಗೊ ಒಳಮನಸು
ಕಪ್ಪು ಕಾವಲ ಕಿತ್ತು
ಬೆಳ್ಳಿ ಮಿನುಗುವ ಕನಸು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಮಿಲಿ ಬ್ರೊಂಟೆಯ – Wuthering Height
Next post ಹೆಮ್ಮರಗಳ ಗೋರಿ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…