ಆಟದ ಗೊಂಬೆ ನಾನಲ್ಲ

ಆಟದ ಗೊಂಬೆ ನಾನಲ್ಲ
ಸೂತ್ರದ ಗೊಂಬೆ ನಾನಲ್ಲ
ಅಮ್ಮನು ಹಾಕಿದ ಹೆಜ್ಜೆಯ
ದನಿಯು ನಾನು ||

ಮಂತ್ರ ಮುಗ್ಧನು ನಾನು
ತಂತ್ರ ಬಲ್ಲವನವನೂ
ಯಾಂತ್ರಿಕ ಬದುಕಿಗೆ ಜೀವ
ತುಂಬಿದವನು ನನ್ನಪ್ಪನು ||

ಬಿಚ್ಚು ಮನಸಿನ
ಹುಚ್ಚು ಕುದುರೆಯ
ಲಗಾಮು ಹಿಡಿದು
ಆಡಿಸಿದವನು ನನ್ನಪ್ಪನು ||

ಅವನ ಕೆಳೆಯು ನಾನು
ಅವನ ಕುಡಿಯು ನಾನು
ನನ್ನ ಅಂತರಂಗ ಎದೆಯಾಳದ
ಸೆಲೆಯು ನನ್ನಪ್ಪನು ||

ಅವನ ಹಾರೈಕೆಯು ನಾನು
ಅವನ ಭಾವೈಕ್ಯವು ನಾನು
ಅವನೊಂದೊಲಿದು ನಲಿದ
ಸಾಮ್ರಾಜ್ಯವು ನಾನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲೇಜು ಚುನಾವಣಾ ಪ್ರಕರಣ
Next post ಆಸೆಗಳೆ ಹೀಗೆ………

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…