ಬೆಳಗಿಸು ಬಾ ಶುಭ ಆರತಿ

ಬೆಳಗಿಸು ಬಾ ಶುಭ ಆರತಿ
ಓ ಮಂಗಳ ದೀವಿಗೆ
ಜಗದ ತಮವು ಹರಿದು ಅಲ್ಲಿ
ಬೆಳಕು ಮೂಡಲೊಮ್ಮೆಗೆ ||

ನವರಾತ್ರಿಯ ನವ ಬೆಳಗದು
ಹರುಷ ತರಲು ಬಾಳಿಗೆ
ಹರಿಸಿ ಅವರ ನಗು ಮೊಗವ
ಅರಳಿಸು ಬಾ ದೀವಿಗೆ ||

ಸುಳ್ಳು ಕಪಟ ಮೋಸವೆಂಬ
ಮನದ ಬಾಳ ಕತ್ತಲೆ
ತೊಡೆದು ಅಲ್ಲಿ ಬೆಳಗಿಸು ಬಾ
ಸ್ನೇಹವೆಂಬ ಚಿತ್ಕಲೇ ||

ನೀನು ಉರಿದು ನೋವ ಉಂಡು
ನಮಗೆ ಬೆಳಕು ನೀಡುವೆ
ಅದುವೆ ಸೊತ್ತು ನಮಗೆ ನಿನ್ನ
ತ್ಯಾಗ ಮಹಿಮೆ ಹಿರಿಮೆಯೆ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಗತಿ ಅಥವಾ ದಾಸ್ಯವಿಮೋಚನೆ – ೨ನೆಯ ಖಂಡ – ದೃಢನಿಶ್ಚಯ
Next post ಮುಂಬಯಿ ಬದುಕು

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…