ಹೊಸ ವರುಷ

ಹೊಸ ವರುಷ
ಹೊಸ ಹರುಷ
ಬರಲಿ ಬರಲಿ
ಮನುಜ ಪ್ರತಿ ನಿಮಿಷ ||

ಫಲಿಸಲಿ ಕನಸು
ದಿಟ್ಟ ಹೆಜ್ಜೆ ಇಡುತಲಿ
ಮಾನ್ಯತೆ ತರಲಿ
ಮಾನವೀಯತೆ ಇರಲಿ
ನಿನ್ನ ದನಿಯಲಿ ||

ಕಷ್ಟಗಳ ಕಳೆದು
ಸುಖ ಸಂಪನ್ನವು ಬರಲಿ
ಅಕ್ಕರೆ ಅಭಿಮಾನಗಳ
ಸೌಖ್ಯ ಕಾಣಲಿ ನಿನ್ನ ಬದುಕಲಿ ||

ಬೆಳಕಾಗಲಿ ಬೆಳಕು
ಚೆಲ್ಲಲಿ ಬಾಳ ಹಾದಿಯಲಿ
ಕೈ ಹಿಡಿದು ನಡೆಸುವಾತ
ಇಹನು ಮರೆಯದಿರು ಎಂದಿಗೂ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ – ೧೧
Next post ನೇಹದಿ ಕೊನರುವುದು ಕೊರಡು

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…