ಬಣ್ಣ ಬಣ್ಣದ ಅಕ್ಷರಗಳಿಂದ
ಬೀಗುತ್ತವೆ
ಬೀದಿ ಬೀದಿಗಳಲ್ಲಿ
ಜಾಹಿರಾತಿನ ಫಲಕಗಳು
ಯಾವ ಅಕ್ಷರಗಳನ್ನೂ
ಶಾಶ್ವತವಾಗಿ ತಮ್ಮೊಳಗೆ ಉಳಿಸಿಕೊಳ್ಳದೆ
ನಿಸ್ವಾರ್ಥ ಸೇವೆ ಸಲ್ಲಿಸುತ್ತವೆ
ಶಾಲೆಗಳಲ್ಲಿನ ಕಪ್ಪು ಹಲಗೆಗಳು
*****
Related Post
ಸಣ್ಣ ಕತೆ
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…