ಭಾವ ಶುದ್ಧಿ ಸಾಧಿಸಿ

ಸಿಟ್ಟು ಮಾಡಿ
ಸುಟ್ಟು ಬಿಡಿ
ಕೆಟ್ಟ ಗುಣಗಳನ್ನ.

ಸಂಸ್ಕರಿಸಿ
ಕಾಮವೆಂಬ ಕೆಟ್ಟ ದಟ್ಟ ಹೊಗೆಯ ನಡುವೆ
ವಿಹರಿಸಿ
ಸತ್ತು ಹೋದ ಜನುಮವನ್ನ.

ಬಗೆ, ಬಗೆ ಬಟ್ಟೆ ಬರೆ ಮರೆಯಲಿ
ತುಂಬು ಜತನದಿಂದ
ಅಡಗಿಸಿಟ್ಟಿರುವ
ಕಾಳ ಮನಸ
ಬಯಲು ಮಾಡಿ
ನಿರಾಳವಾಗಿ ಬಿಡಿ.

ಹುಟ್ಟು ಸಾವ ದಾರಿ ನಡುವೆ
ಒಂದು ಘಳಿಗೆಯಾದರೂ
ಭಾವಶುದ್ಧಿ ಸಾಧಿಸಿ
ಸಾಯಿರಿ; ಸುಖಿಸಿರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾತೊರೆಯುತಿದೆ ಮನಸು
Next post ಭವಿಷ್ಯ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…