ಕಾಲ ನಿಲ್ಲುತ್ತದೆ

ಕಾಲ ನಿಲ್ಲುವುದಿಲ್ಲ ಎಂದು ಕಣವಿ
ಹೇಳಿದರು ಸುಮ್ಮನೆ
ಕಾಲ ನಿಲ್ಲುತ್ತದೆ ಮೋಡದೊಳಗೆ
ವಿಮಾನ ಹೊಕ್ಕಾಗ ಗಕ್ಕನೇ

ಮೊನ್ನೆ ಕುಳಿತೆ ಜೀವಮಾನದ ಮೊದಲ
ವಿಮಾನಾಂತರಂಗ ಪ್ರವೇಶ
ಮನೆ ಮರಗಳು ಆಗುತ್ತಾ ಚಿಕ್ಕ
ಬೆಂಕಿ ಪೊಟ್ಟಣ ಯಂತ್ರ

ಹೊಕ್ಕಿತು ಮೋಡಗಳ ದಿಬ್ಬಣ
ಎಡಕ್ಕೆ ಬಲಕ್ಕೆ ಮೇಲಕ್ಕೆ ಕೆಳಕ್ಕೆ
ಬರೀ ಮಂಜಿನಂತೆ ಬೆಳ್ಳಗಿನ ಹತ್ತಿ
ನಿಂತಿದೆಯೋ ಇದು ನುಗ್ಗುತ್ತಿದೆಯೋ

ಗಾಳಿಯಲ್ಲಿ ಗುರಿಯಿಟ್ಟ ಬಾಣ
ಭವ ಬಂಧನಗಳ ಗೋಜಲು
ಪರಂಪರೆಗೆ ಹೋಲಿಸುವಂತೆ
ನಡೆದಿದೆ ವಿಮಾನಯಾನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದೊ ಪೂರ್ವದಿಕ್ಕಿನಲಿ ಘನ ಉದಾತ್ತಜ್ಯೋತಿ
Next post ಹೀರೋ ಹೋಂಡಾ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…